ಬೆಳ್ತಂಗಡಿ, ಜೂ09: ಕರಾವಳಿ ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಬೆಳ್ತಂಗಡಿಯಲ್ಲಿ ಮಹಿಳೆಯೊಬ್ಬರು ತುಂಬಿ ಹರಿಯುತ್ತಿದ್ದ ಹೊಳೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ನಿವಾಸಿ ರೇವತಿ (50) ಮೃತ ಮಹಿಳೆ. ಶಿರ್ಲಾಲ್ ಬಳಿ ತುಂಬಿ ಹರಿಯುತ್ತಿದ್ದ ಹೊಳೆಗೆ ರೇವತಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ಮಂಗಳೂರು ನಗರದಲ್ಲೂ ಸಹ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆಯಿಂದಾಗಿ ಜನ ಸಂಚಾರ ಸಹ ವಿರಳವಾಗಿದೆ. ಮಳೆಯಿಂದಾಗಿ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ ಬಳಿಯ ರಾಮಕಾಂತಿ ಥಿಯೇಟರ್ ಸಮೀಪ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ 2 ಬೈಕ್ಗಳು ಜಖಂಗೊಂಡಿವೆ.