ಮಂಗಳೂರು, ಡಿ.02 (DaijiworldNews/MB) : ಕಳೆದ ಹಲವು ದಿನಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಕೆ ಕಂಡಿದೆ. ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಮಂಗಳವಾರ 36 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಹಾಗೆಯೇ ಉಡುಪಿಯಲ್ಲಿ ಮಂಗಳವಾರ 14 ಕೊರೊನಾ ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 31,959 ಕೊರೊನಾ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 582 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ ಒಟ್ಟು 3,66,486 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಈ ಪೈಕಿ 3,34,527 ನೆಗೆಟಿವ್ ಆಗಿದೆ.
ಮಂಗಳವಾರ 42 ಜನರನ್ನು ಬಿಡುಗಡೆ ಮಾಡಲಾಗಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 30,664 ಕ್ಕೆ ಏರಿದೆ. ಹಾಗೆಯೇ ಜಿಲ್ಲೆಯಲ್ಲಿ ಈವರೆಗೆ ಒಟ್ಟು 713 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14,988 ಕ್ಕೂ ಹೆಚ್ಚು ಮಾಸ್ಕ್ ಧರಿಸುವ ನಿಯಮ ಉಲ್ಲಂಘನೆ ವರದಿಯಾಗಿದ್ದು, 16,09,772 ರೂ.ಗಳ ದಂಡವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಇನ್ನು ಉಡುಪಿಯಲ್ಲಿ ಮಂಗಳವಾರ ದಾಖಲಾದ 14 ಹೊಸ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 22,704 ಕ್ಕೆ ಏರಿದೆ. ಈ ಪೈಕಿ 197 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 2,47,256 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದ ಆ ಪೈಕಿ 2,24,552 ನೆಗೆಟಿವ್ ಆಗಿದೆ. ಮಂಗಳವಾರ 22 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 22,320 ಕ್ಕೆ ಏರಿದೆ. ಹಾಗೆಯೇ ಜಿಲ್ಲೆಯಲ್ಲಿ ಈವರೆಗೆ ಒಟ್ಟು 187 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.