ಕಾಸರಗೋಡು, ಡಿ. 02 (DaijiworldNews/SM): ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೊರೋನಾ ಸೋಂಕು ಇದೀಗ ಮತ್ತೆ ಏರಿಕೆಯಾಗ ತೊಡಗಿದೆ. ಬುಧವಾರದಂದು ಮತ್ತೆ 108 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಬುಧವಾರದಂದು ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಪೈಕಿ 104 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಈ ನಡುವೆ ಬುಧವಾರ 33 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 1093 ಮಂದಿ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 8020 ಮಂದಿ ನಿಗಾದಲ್ಲಿದ್ದಾರೆ.