ವಿಟ್ಲ, ಡಿ.03 (DaijiworldNews/MB) : ಎರಡು ಕಾರುಗಳ ನಡುವೇ ಭೀಕರ ಅಪಘಾತ ಸಂಭವಿಸಿ ಚಾಲಕ ಗಂಭೀರ, ಮಗು ಹಾಗೂ ಮಹಿಳೆ ಸಹಿತ ಮೂವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.





ಮಾಣಿ ನಿವಾಸಿಗಳಾದ ವೇಗನರ್ ಕಾರಿನ ಚಾಲಕ ನಯಾಜ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸಂಬಂಧಿಗಳಾದ ಸಫಾ ಹಾಗೂ ಚಿಕ್ಕ ಮಗು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಇವರು ನೇರಳಕಟ್ಟೆ ಮದುವೆ ಹಾಲ್ ನಿಂದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವೇಗನರ್ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ವೇಗನರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ರಿಡ್ಜ್ ಕಾರಿನ ಏರ್ ಬ್ಯಾಗ್ ತೆರೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.