ಮಂಗಳೂರು, ಡಿ. 03 (DaijiworldNews/SM): ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ವರದಿ ಪ್ರಕಾರ ಗುರುವಾರದಂದು ಜಿಲ್ಲೆಯಲ್ಲಿ 35 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,029 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 433 ಮಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರದಂದು ಒಟ್ಟು 66 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 30,877 ಕ್ಕೆ ತಲುಪಿದೆ. ಗುರುವಾರ ಎರಡು ಸೇರಿದಂತೆ ಒಟ್ಟು 717 ಸಾವುಗಳು ಈವರೆಗೆ ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಗುರುವಾರ 28 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ 22,745 ಕ್ಕೆ ಏರಿಕೆಯಾಗಿದೆ. ಈ ಪೈಕಿ 199 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 2,51,181 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,28,436 ಮಂದಿಯ ಮಾದರಿಗಳು ನಕಾರಾತ್ಮಕವಾಗಿವೆ. ಗುರುವಾರ 18 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,359ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 187 ಸಾವುಗಳು ಸಂಭವಿಸಿವೆ.