ಕಾಸರಗೋಡು, ಡಿ.04 (DaijiworldNews/PY): ಗ್ರನೇಡ್ (ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಡಿ.4ರ ಶುಕ್ರವಾರದಂದು ಬೆಳಿಗ್ಗೆ ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ನಡೆದಿದೆ.

ಗಾಯಗೊಂಡ ಸುಧಾಕರ ಹಾಗೂ ಪವಿತ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ ತರಬೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಿಸಿ ಈ ಅವಘಡ ನಡೆದಿದೆ.
ಈ ಪೈಕಿ ಸುಧಾಕರ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರಿಗೆ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.