ಡಿ. 04 (DaijiworldNews/SM): ಸುಮಾರು ಹದಿನೈದು ವರ್ಷಗಳ ಹಿಂದೆ ಐದು ಜನರು ಸೇರಿಕೊಂಡು ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2005ರಲ್ಲಿ ಐದು ಜನರು ಖಾಸಗಿ ಬಸ್ ಕಂಡಕ್ಟರ್ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಿದ್ದರು. ಈ ಕುರಿತಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಆದರೆ, ಮತ್ತೋರ್ವ ಆರೋಪಿ ತಲೆ ಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇರಳದ ಕಾಸರಗೋಡಿನ ಮೀಪುಗುರಿ ಮಾಧುರ್ ರಸ್ತೆಯ ನಿವಾಸಿ ಪ್ರವೀಣ್(40) ಬಂಧಿತ ಆರೋಪಿಯಾಗಿದ್ದಾನೆ. ಶುಕ್ರವಾರ ಬೆಳಿಗ್ಗೆ ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಿಖರ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈ ವಿಚಾರವನ್ನು ಮಂಗಳೂರು ಪೊಲೀಸ್ ಕಮಿಷನರ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.