ಮಂಗಳೂರು, ಡಿ.05 (DaijiworldNews/PY): ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಡಿ.5ರ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮೃತಪಟ್ಟ ಬಾಲಕನನ್ನು ಬಶೀರ್ ಅಹ್ಮದ್ ಹಾಗೂ ರಿಯಾನ್ ದಂಪತಿಗಳ ಹಿರಿಯ ಪುತ್ರ ಐಯಾನ್ (16). ಇವರು ಕುಂಪಾಲ ಬೈಪಾಸ್ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.
ಡಿ..4ರ ಶುಕ್ರವಾರದಂದು ಸಂಜೆ ಐಯಾನ್ ತನ್ನ ಮನೆಯ ಮುಂದಿನ ರಸ್ತೆ ದಾಟುತ್ತಿದ್ದ ಸಂದರ್ಭ ತಲಪಾಡಿಯಿಂದ ಮಂಗಳೂರುಗೆ ಹೋಗುತ್ತಿದ್ದ ರಿಟ್ಜ್ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡಿದ್ದ. ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿ ನಿಂತಿದೆ.
ಐಯಾನ್ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಈತನ ಸಹೋದರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.