ಮಂಗಳೂರು, ಡಿ.05 (DaijiworldNews/MB) : ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ವರದಿ ಪ್ರಕಾರ ಶನಿವಾರದಂದು ಜಿಲ್ಲೆಯಲ್ಲಿ 37 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,108 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 568 ಮಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರದಂದು ಒಟ್ಟು 33 ಮಂದಿ ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 30824 ಕ್ಕೆ ತಲುಪಿದೆ.
ಶನಿವಾರ ಓರ್ವ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 716 ಕ್ಕೆ ಏರಿದೆ.