ಉಡುಪಿ, ಡಿ.05 (DaijiworldNews/MB) : ಶನಿವಾರ ಉಡುಪಿ ಜಿಲ್ಲೆಯಲ್ಲಿ 14 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಸೋಂಕು ಪ್ರಕರಣಗಳು 22,773 ಕ್ಕೆ ಏರಿದೆ. ಈ ಪೈಕಿ 183 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಇಲ್ಲಿಯವರೆಗೆ 2,54,762 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,31,989 ಮಾದರಿಗಳು ನೆಗೆಟಿವ್ ಆಗಿದೆ.
ಶನಿವಾರ 27 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 187 ಸೋಂಕಿತರು ಸಾವನ್ನಪ್ಪಿದ್ದಾರೆ.