ಮಂಗಳೂರು, ಡಿ. 06 (DaijiworldNews/SM): ಕರಾವಳಿಯಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದೆ. ಡಿಸೆಂಬರ್ 6 ರ ರವಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ 19 ಹೊಸ ಪ್ರಕರಣಗಳು ಮತ್ತು ಉಡುಪಿಯಲ್ಲಿ 15 ಹೊಸ ಪ್ರಕರಣಗಳು ದೃಢಪಟ್ಟಿವೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 3,84,579 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 3,52,452 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಸಂಖ್ಯೆ 32,127 ಆಗಿದೆ. ಈ ಪೈಕಿ ಕೇವಲ 542 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿವಾರದಂದು 44 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಒಟ್ಟು 30,868ಕ್ಕೆ ತಲುಪಿದೆ. ರವಿವಾರ ಒಂದು ಸಾವು ಸೇರಿದಂತೆ, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 717ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇಲ್ಲಿಯವರೆಗೆ 2,56,282 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 2,33,494 ನೆಗೆಟಿವ್ ಆಗಿದೆ. ಭಾನುವಾರ ಒಟ್ಟು 15 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 22,788 ಕ್ಕೆ ಏರಿಕೆಯಾಗಿದೆ. ಈ ಪೈಕಿ 170 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಆಸ್ಪತ್ರೆಗಳಿಂದ ಭಾನುವಾರ 28 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 22,431 ಕ್ಕೆ ತಲುಪಿದೆ. ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ ಇಬ್ಬರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದರೆ, ಉಳಿದ 13 ಮಂದಿ ಮನೆಯಲ್ಲೇ ಇದ್ದಾರೆ.