ಬೆಂಗಳೂರು, 13 : ಸಮ್ಮಿಶ್ರ ಸರ್ಕಾರ ರಚನೆಯ ಬಳಿಕ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ನಡುವಿನ ಪ್ರತಿಷ್ಟೆಯ ಕಣವಾಗಿರುವ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಜಯನಗರದ ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಪ್ರಾರಂಭವಾದ ಮತ ಎಣಿಕೆಯ ಮೊದಲ ಸುತ್ತಿನನಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 3,749 ಮತ, ಬಿಜೆಪಿಗೆ 3322 ಮತ ಹಾಗೂ ರವಿಕೃಷ್ಣ ರೆಡ್ಡಿ- 151 ಗಳಿಸುವುದರೊಂದಿಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಇನ್ನು ಇವಲ್ಲದೆ ಅಂಚೆ ಮತದಲ್ಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು.
ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಹಾಗೂ ಕಾಂಗ್ರೆಸ್ ನಿಂದ ಸೌಮ್ಯ ರೆಡ್ಡಿ ಕಣಕ್ಕೆ ಇಳಿದಿದ್ದರು.