ಕಾಸರಗೋಡು, ಡಿ. 07 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತಗಳಾಗುತ್ತಿದ್ದು, ಸೋಮವಾರ ಜಿಲ್ಲೆಯಲ್ಲಿ 44 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇನ್ನು ಈ ಪೈಕಿ 39 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. 63 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1066 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. 7500 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ. ಇದುವರೆಗೆ 22558 ಮಂದಿಗೆ ಸೋಂಕು ತಗುಲಿದೆ ಎನ್ನುವ ವಿವರ ಲಭಿಸಿದೆ.
ಈ ಪೈಕಿ 21252 ಮಂದಿ ಗುಣಮುಖರಾಗಿದ್ದಾರೆ.