ಮಂಗಳೂರು, ಡಿ.08 (DaijiworldNews/MB) : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ದ ಕಳೆದ 13 ದಿನಗಳಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಲ್ಲಿದ್ದು ಮಂಗಳವಾರ ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಬಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಣಾಮ ಬೀರಿಲ್ಲ. ಜಿಲ್ಲೆಯಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ.



ಮಂಗಳೂರು







ಉಡುಪಿ
ಎಂದಿನಂತೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯೂ ಆರಂಭವಾಗಿದ್ದು ಆದರೆ ಮೈಸೂರು ಮತ್ತು ಉತ್ತರ ಕರ್ನಾಟಕ ಭಾಗಗಳಿಗೆ ಹೋಗಲು ಬಸ್ ಚಾಲಕರು ಹಿಂದೇಟು ಹಾಕುತ್ತಿರುವುದು ಕಂಡು ಬಂದಿದೆ. ಆ ಜಿಲ್ಲೆಗಳಲ್ಲಿ ಕಲ್ಲು ತೂರಾಟವಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಚಾಲಕರು ಹೇಳುತ್ತಾರೆ.
ಆದರೂ ಬಸ್ಗಳು ಬಸ್ ನಿಲ್ದಾಣದಲ್ಲಿ ಬಂದು ತಂಗಿದ್ದು ಅರ್ಧ ದಾರಿಗೆ ಸಾಗಿ ಮುಂದಿನ ನಿರ್ಧಾರದ ಬಗ್ಗೆ ಯೋಚನೆ ನಡೆಸುವ ಸಾಧ್ಯತೆಯಿದೆ.
ಇನ್ನು ಜಿಲ್ಲೆಯಲ್ಲಿ ಬಂದ್ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್ಗೆ ಸಂಪೂರ್ಣ ಬೆಂಬಲ ದೊರೆತಿದೆ. ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟದಿಂದಲೂ ಬಂದ್ಗೆ ಬೆಂಬಲ ದೊರೆತಿದ್ದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರು ಸರ್ಕಲ್ ಬಳಿ ರಾಸ್ತಾ ರುಕೋ ಚಳುವಳಿ ನಡೆಸಲು ಸಂಘಟನೆ ನಿರ್ಧರಿಸಿದೆ.
ಉಡುಪಿಯಲ್ಲಿ, ಈವರೆಗೆ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸಾಮಾನ್ಯವಾಗಿ ಚಲಿಸುತ್ತಿವೆ. ಸಿಟಿ, ಎಕ್ಸ್ಪ್ರೆಸ್, ಕೆಎಸ್ಆರ್ಟಿಸಿ ಮತ್ತು ಸರ್ವಿಸ್ ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ. ಆದರೂ ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ಬಲಪಡಿಸಲಾಗಿದೆ. ಸಂಜೆ, ಸಮಾನ ಮನಸ್ಕ ಸಂಸ್ಥೆಗಳು ಪ್ರತಿಭಟನೆಯನ್ನು ನಡೆಸಲಿದೆ.