ಕಾಸರಗೋಡು, ಡಿ. 08 (DaijiworldNews/SM): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಲ್ಪ ಏರಿಕೆಯಾಗಿದ್ದು, ಮಂಗಳವಾರ 79 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು, 77 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.

ಈ ನಡುವೆ ಮಂಗಳವಾರದಂದು 161 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 984 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ. ಪ್ರಸ್ತುತ 7491 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 22637 ಮಂದಿಗೆ ಸೋಂಕು ತಗುಲಿದೆ. 21413 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 240 ಮಂದಿ ಮೃತಪಟ್ಟಿದ್ದಾರೆ.