ಕಾಸರಗೋಡು, ಡಿ.09 (DaijiworldNews/PY): ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕಾಸರಗೋಡಿನ ದೇಲಂಪಾಡಿ ಮಲ್ಲಂಪಾರೆಯಲ್ಲಿ ನಡೆದಿದೆ.


ಜಯರಾಜ್, ಚಂದ್ರಶೇಖರ್ ಹಾಗೂ ವಿಶ್ವನಾಥ್ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
"ಸಿಪಿಎಂ ಕಾರ್ಯಕರ್ತರು ಈ ಹಲ್ಲೆ ಮಾಡಿದ್ದಾರೆ. ಎರಡು ದಿನಗಳಿಂದ ಸಿಪಿಎಂ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು, ಪ್ರಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಲಾಗಿದೇ, ಸಿಪಿಎಂ ಹಿಂಸೆಗೆ ಇಳಿದಿದೆ" ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಹಾಗೂ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.