ಕಾಸರಗೋಡು, ಡಿ. 09 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 52 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 52 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಬುಧವಾರದಂದು 29 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇನ್ನು ಜಿಲ್ಲೆಯಲ್ಲಿ 7201 ಮಂದಿ ಪ್ರಸ್ತುತ ನಿಗಾದಲ್ಲಿದ್ದಾರೆ. 1007 ಮಂದಿ ಜಿಲ್ಲೆಯಲ್ಲಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.
ಇದುವರೆಗೆ 22689 ಮಂದಿಗೆ ಸೋಂಕು ತಗಲಿದ್ದು, ಈ ಪೈಕಿ 1069 ಮಂದಿ ವಿದೇಶಗಳಿಂದ ಹಾಗೂ 838 ಮಂದಿ ಹೊರ ರಾಜ್ಯಗಳಿಂದ ಮರಳಿದವರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 20,782 ಮಂದಿಗೆ ಸಂಪರ್ಕದಿಂದ ಸೋಂಕು ದೃಡಪಟ್ಟಿದೆ. 21442 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 240 ಮಂದಿ ಮೃತಪಟ್ಟಿದ್ದಾರೆ.