ಮಂಗಳೂರು, ಡಿ.12 (DaijiworldNews/PY): ಕೊಡಿಯಾಲ್ಬೈಲ್ ಮಾನಸ ಟವರ್ ಬಳಿ ಟಾಟಾ ಇಂಡಿಕಾ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.12ರ ಶನಿವಾರದಂದು ನಡೆದಿದೆ.














ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಯಾರಿಗೂ ನೋವು ಸಂಭವಿಸಿಲ್ಲ ಎನ್ನಲಾಗಿದೆ.
ಪೊಲೀಸರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.