ಮಂಗಳೂರು, ಡಿ.12 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 53 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು 43 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 4,00,179 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಆ ಪೈಕಿ 3,67,854 ಮಾದರಿಗಳು ನೆಗೆಟಿವ್ ಆಗಿದೆ.
ಶನಿವಾರದಂದು 53 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಈವರೆಗೆ ಒಟ್ಟು 32325 ಮಂದಿಗೆ ಸೋಂಕು ದೃಢಪಟ್ಟಿದೆ. ಪ್ರಸ್ತುತ 420 ಪ್ರಕರಣಗಳು ಸಕ್ರಿಯವಾಗಿದೆ.
ಶನಿವಾರ 43 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 31,171 ಕ್ಕೆ ಏರಿಕೆಯಾಗಿದೆ.
ಇನ್ನು ಶನಿವಾರ ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ 730 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 16,697 ಮಾಸ್ಕ್ ನಿಯಮ ಉಲ್ಲಂಘಟನೆ ಪ್ರಕರಣಗಳು ಪತ್ತೆಯಾಗಿದ್ದು 17,73,897 ರೂ. ದಂಡ ವಸೂಲಿ ಮಾಡಲಾಗಿದೆ.