ಉಡುಪಿ, ಡಿ.12 (DaijiworldNews/MB) : ಉಡುಪಿ ಜಿಲ್ಲೆಯಲ್ಲಿ ಶನಿವಾರ 21 ಮಂದಿಗೆ ಕೊರೊನಾ ದೃಢಪಟ್ಟಿದ್ದು 27 ಸೋಂಕಿತರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 263971 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಆ ಪೈಕಿ 241087 ಮಾದರಿಗಳು ನೆಗೆಟಿವ್ ಆಗಿದೆ.
ಶನಿವಾರದಂದು 21 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಈವರೆಗೆ ಒಟ್ಟು 22884 ಮಂದಿಗೆ ಸೋಂಕು ದೃಢಪಟ್ಟಿದೆ. ಪ್ರಸ್ತುತ 138 ಪ್ರಕರಣಗಳು ಸಕ್ರಿಯವಾಗಿದೆ.
ಶನಿವಾರ 27 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 22559 ಕ್ಕೆ ಏರಿಕೆಯಾಗಿದೆ.
ಇನ್ನು ಶನಿವಾರ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕಿತರು ಸಾವನ್ನಪ್ಪಿದ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ 187 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.