ಮಂಗಳೂರು, ಡಿ.12 (DaijiworldNews/MB) : ರಾಜ್ಯ ಹಜ್ ಕಮಿಟಿ ಸದಸ್ಯ, ಮಂಜನಾಡಿ ಅಸೈ ವಾರ್ಡಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹನೀಫ್ ನಿಜಾಮಿಯವರ ಕೊಲೆ ಯತ್ನ ನಡೆದಿದೆ.

ಅಸೈಗೋಳಿ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ಕರೀಂ ಎಂಬಾತನು ಹನೀಫ್ ಅವರಿಗೆ ತಲೆಗೆ ಸುತ್ತಿಗೆಯಿಂದ ಬಡಿದು ಹನೀಫ್ ಅವರ ಕೊಲೆ ಯತ್ನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಹನೀಫ್ ಕರ್ನಾಟಕ ರಾಜ್ಯ ಹಜ್ ಕಮಿಟಿ ಸದಸ್ಯರು ಹಾಗೂ ಧಾರ್ಮಿಕ ಗುರುಗಳಾಗಿದ್ದಾರೆ ಎಂದು ತಿಳಿದು ಬಂದಿದ್ದು ಗಂಭೀರವಾಗಿ ಗಾಯಗೊಂಡಿರುವ ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದ ವಾರ್ಡ್ನಲ್ಲಿ ಸ್ಪರ್ಧಿಸುತ್ತಿರುವ ದ್ವೇಷದಿಂದ ಕೊಲೆ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.