ಕಾಸರಗೋಡು, ಡಿ.12 (DaijiworldNews/MB) : ''ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಗೆ ಮತ ಚಲಾಯಿಸಲು ಹೊರ ರಾಜ್ಯಗಳಿಂದ ಆಗಮಿಸುವರು ಕೊರೊನಾ ಪರೀಕ್ಷೆ ನಡೆಸಬೇಕಿಲ್ಲ'' ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಪರೀಕ್ಷೆ ನಡೆಸಿ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಶುಕ್ರವಾರ ಮನವಿ ಮಾಡಿದ್ದರು. ಆದರೆ ರಾಜಕೀಯ ಪಕ್ಷ ಗಳು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆ ಕಡ್ಡಾಯ ಮಾಡದಿರಲು ತೀರ್ಮಾನಿಸಲಾಗಿದೆ.
''ಆಂಟಿಜನ್ ಟೆಸ್ಟ್ ನಡೆಸಲಾಗಿದೆಯೇ ಎಂಬ ಬಗ್ಗೆ ತಪಾಸಣೆ ನಡೆಸಲು ಯಾರಿಗೂ ಜವಾಬ್ದಾರಿ ನೀಡಿಲ್ಲ'' ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.