ಉಡುಪಿ,ಡಿ.13 (DaijiworldNews/HR): ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯ( 84) ಭಾನುವಾರ ತಮ್ಮ ಸ್ವಗೃಹ ಅಂಬಲಪಾಡಿಯಲ್ಲಿ ನಿಧನರಾಗಿದ್ದಾರೆ.

1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ ಬನ್ನಂಜೆ ಗೋವಿಂದಾಚಾರ್ಯ ಅವರು, ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ಕೂಡ ರಚಿಸಿದ್ದಾರೆ.
ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಜೊತೆಗೆ ಮೂರು ಚಲನಚಿತ್ರಗಳಿಗೆ ಕೂಡ ಸಂಭಾಷಣೆ ಬರೆದಿದ್ದಾರೆ.
ಇನ್ನು ಡಾ. ಬನ್ನಂಜೆ ಗೋವಿಂದಾಚಾರ್ಯ ಅವರು ನಟ ಡಾ.ವಿಷ್ಣುವರ್ಧನ್ಗೆ ಅವರಿಗೆ ಆಧ್ಯಾತ್ಮಿಕ ಗುರುಗಳಾಗಿದ್ದರು.