ಮಂಗಳೂರು ಸೆ 26: ಚಕ್ರವರ್ತಿ ಸೂಲಿಬೆಲೆ ಅವರನ್ನು ಅರಣ್ಯ ಸಚಿವ ರಮಾನಾಥ್ ರೈ ಅವ್ಯಾಚ್ಯ ಶಬ್ಬಗಳಿಂದ ನಿಂದಿಸಿದ ವಿಚಾರವಾಗಿ ಸಚಿವ ರೈ ವಿರುದ್ದ ಮಂಗಳೂರು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಹೀಂ ಉಚ್ಚಿಲ್ ಈ ದೂರು ದಾಖಲಿಸಿದ್ದು ಉದ್ದೇಶಪೂರ್ವಕವಾಗಿ ಚಕ್ರವರ್ತಿ ಸೂಲಿಬೆಲೆ ಮಾನಹಾನಿ ಆರೋಪ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 22ರಂದು ಹಸೈಗೋಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ರಮಾನಾಥ್ ರೈ
ಚಕ್ರವರ್ತಿ ಸೂಲಿಬೆಲೆಯನ್ನು ಕೆಟ್ಟ ಪದಗಳಿಂದ ನಿಂದಿಸಿದ್ದರು.