ಉಡುಪಿ, ಡಿ. 16 (DaijiworldNews/SM): ಗ್ರಾಮ ಪಂಚಾಯತ್ ಚುನಾವಣೆ ಅಂದರೆ ಪ್ರಜಾಪ್ರಭುತ್ವದ ಹಬ್ಬ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಜರಗಿದ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಂಚಾಯತ್ಗಳ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಹಾಗೂ ವೀಕ್ಷಕರ ಸಭೆಯಲ್ಲಿ ಮಾತನಾಡಿದರು.
ದೀಪಾವಳಿ, ಕ್ರಿಸ್ಮಸ್, ರಮ್ಜಾನ್ ಹಬ್ಬದಂತೆ ಚುನಾವಣೆಯಲ್ಲಿ ಸ್ಪರ್ಧೆ ಮುಖ್ಯ. ಸೋಲು ಗೆಲುವು ನಮ್ಮ ಹಣೆಯಲ್ಲಿ ಬರೆದಂತಾಗುತ್ತದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ಸಂತೋಷ ತಂದಿದೆ ಎಂದು ಶುಭ ಹಾರೈಸಿದರು.