ಮಂಗಳೂರು,ಸೆ.04: ಸೆ.7 ರಂದು ಬಿಜೆಪಿ ಯುವ ಮೋರ್ಚಾ ನಡೆಸಲು ಉದ್ದೇಶಿಸಿದ ಮಂಗಳೂರು ಚಲೋ ರ್ಯಾಲಿಗೆ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಉದ್ದೇಶ ಮತ್ತು ಮಂಗಳೂರು ಕೋಮು ಸೂಕ್ಷ್ಮ ಪ್ರದೇಶದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ಚಲೋಗೆ ಅನುಮತಿ ನಿರಾಕರಿಸಿದ್ದಾರೆ ಎಂದವರು ಹೆಳಿದ್ದಾರೆ.
ಈ ನಡುವೆ ಬಿಜೆಪಿ ಯುವ ಮೊರ್ಚಾದ ರ್ಯಾಲಿಗೆ ತಡೆಯೊಡ್ಡಲು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳಿಗೆ ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ನಾಯಕರು ಈ ರ್ಯಾಲಿಯನ್ನು ನಡೆಸಿಯೇ ಸಿದ್ದ ಎಂದು ಪಟ್ಟು ಹಿಡಿದ್ದಿದ್ದಾರೆ.