ಉಜಿರೆ, ಡಿ. 17 (DaijiworldNews/SM): ಇಲ್ಲಿನ ರಥಬೀದಿ ಸಮೀಪ ಆಟವಾಡುತ್ತಿದ್ದ ಬಾಲಕನೊಬ್ಬನನ್ನು ದುಷ್ಕರ್ಮಿಗಳ ತಂದವೊಂದು ಅಪಹರಣ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಆಯಾಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಉದ್ಯಮಿಯೊಬ್ಬರ ಮಗನನ್ನು ಕಿಡ್ನ್ಯಾಪ್ ಮಾಡಲಾಗಿದೆ ಎನ್ನಲಾಗಿದ್ದು, ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ ಎನ್ನಲಾಗಿದೆ. ಗುರುವಾರದಂದು ಸಂಜೆ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಇಂಡಿಕಾ ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನ್ಯಾಪ್ ಕೃತ್ಯಕ್ಕೆ ಕೈ ಹಾಕಿದ್ದಾರೆ. ಸ್ಥಳೀಯರಿಂದ ದೊರೆತ ಮಾಹಿತಿಯಂತೆ ಕಾರಿನಲ್ಲಿದ್ದವರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎನ್ನಲಾಗಿದೆ.
ಆದರೆ, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.