ಮಂಗಳೂರು, ಡಿ.18 (DaijiworldNews/PY): ಜಿಲ್ಲಾ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಅಧ್ಯಕ್ಷ ಮಾದವ ಮಾವೆ, ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ, ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.

ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು, ದ.ಕ ಜಿಲ್ಲಾಧ್ಯಕ್ಷ ಸುದರ್ಶನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು
ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ ಇಗ್ಭಾಗಗೊಂಡಿದೆ. ನಾಯಕತ್ವದ ಕೊರತೆಯಿಂದ ಸತತ ಸೋಲಿನ ವೈಫಲ್ಯದಿಂದ ಬೇಸತ್ತು ಬಂಟ್ವಾಳದ ಇನ್ನಷ್ಟು ಕಾಂಗ್ರೆಸ್ ನಾಯಕರುಗಳು ಬಿಜೆಪಿಗೆ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದು, ಬಿಜೆಪಿ ನಾಯಕರುಗಳೊಂದಿಗೆ ಸಂಪರ್ಕದಲ್ಲಿದ್ದು, ಮುಂಬರುವ ಪಂಚಾಯತ್ ಚುನಾವಣೆಗೆ ಮೊದಲೇ ಪರೋಕ್ಷವಾಗಿ ಬಂಟ್ವಾಳದಲ್ಲಿ ಕಾಂಗ್ರೆಸ್ ಸೋಲೊಪ್ಪಿಕೊಂಡಂತಾಗಿದೆ.