ಕಾಸರಗೋಡು,ಡಿ.19 (DaijiworldNews/HR): ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳು ಬಾಂಬೆಸೆದ ಘಟನೆ ಇಂದು ಮುಂಜಾನೆ ಪಡನ್ನಡದಲ್ಲಿ ನಡೆದಿದೆ.

ಸಾಂಧರ್ಭಿಕ ಚಿತ್ರ
ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ ಫೈಝಲ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಮನೆಗೆ ಹಾನಿ ಉಂಟಾಗಿದೆ.
ಮುಂಜಾನೆ ಶಬ್ದ ಕೇಳಿ ಮನೆಯವರು ಎಚ್ಚೆತ್ತು ನೋಡಿದಾಗ ಕಿಟಿಕಿ ಗಾಜುಗಳು ಹುಡಿಯಾಗಿದ್ದು, ಗೋಡೆಗೆ ಹಾನಿ ಕಂಡು ಬಂದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದರು.
ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಕಾರಿಗೂ ಹಾನಿಯಾಗಿದ್ದು, ಬೈಕ್ನಲ್ಲಿ ಬಂದ ತಂಡವು ಈ ಕೃತ್ಯ ನಡೆಸಿದೆ ಎನ್ನಲಾಗಿದೆ.
ಘಟನೆ ಬಗ್ಗೆ ಚಂದೇರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ನಡೆಸುತ್ತಿದ್ದಾರೆ.