ಮಂಗಳೂರು, ಡಿ.19 (DaijiworldNews/HR): ಕರ್ತವ್ಯನಿರತ ಪೊಲೀಸರ ಮೇಲೆ ದುಷ್ಕರ್ಮಿಗಳು ಮತ್ತೊಂದು ದಾಳಿ ನಡೆಸಿದ ಘಟನೆ ತಣ್ಣೀರುಬಾವಿ ಪಾಯಿಂಟ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕಾರ್ಯನಿರತ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ನಾಲ್ವರು ಪೊಲೀಸರ ಮೇಲೆ ಕಲ್ಲು ತೂರಲು ಯತ್ನಿಸಿ, ಬಳಿಕ ಪೊಲೀಸರಲ್ಲಿದ್ದ ಬಂದೂಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.