ಸುಬ್ರಹ್ಮಣ್ಯ, ಡಿ.20 (DaijiworldNews/PY): ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೊತ್ಸವ ಸಂಪನ್ನಗೊಂಡಿತು.


ಮುಂಜಾನೆಯ 7.25ರ ಧನು ಲಗ್ನ ಸುಮುಹೂರ್ತದಲ್ಲಿ ಭಕ್ತರ ಆರಾಧ್ಯ ದೇವನಾದ ಶ್ರೀಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು, ಅಪಾರ ಸಂಖ್ಯೆ ಭಕ್ತರು ದರ್ಶನ ಪಡೆದಿದ್ದಾರೆ.
ಕೊರೊನಾ ಹಿನ್ನೆಲೆ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂಧಿಸಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ಕಣ್ತುಂಬಿಕೊಂಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಡೆಸ್ನಾನವನ್ನು ರದ್ದುಪಡಿಸಲಾಗಿತ್ತು. ಅದರೆ, ಕೆಲವೇ ಕೆಲವು ಮಂದಿ ಬೀದಿ ಮಡೆ ಸ್ನಾನ ಮಾಡುವ ದೃಶ್ಯ ಕಂಡು ಬಂದಿದೆ. ಕೊರೊನಾ ಹಿನ್ನೆಲೆ, ಜಾತ್ರೆ ವೇಳೆ ಸಂತೆ ವ್ಯಾಪಾರ ಅಂಗಡಿಗಳಿಗೆ ನಿರ್ಬಂಧ ಹೇರಲಾಗಿದೆ. ಇನ್ನು ಜಾತ್ರಾ ವೇಳೆ ಗರಿಷ್ಠ ಪ್ರಮಾಣದಲ್ಲಿ ಕೊರೊನಾ ನಿಯಮ ಪಾಲನೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.