ಕಾರ್ಕಳ, ಡಿ.21 (DaijiworldNews/HR): ರಾಜ್ಯಕ್ಕೆ ಮಾದರಿಯಾಗಿರುವ ಕಾರ್ಕಳ ವಿಧಾನ ಸಭಾ ಕ್ಷೇತ್ರವು ಐತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. 2020ರಲ್ಲಿ ರೂ. 81 ಕೋಟಿ ವೆಚ್ಚದಲ್ಲಿ 87 ಕಿಂಡಿ ಅಣೆಕಟ್ಟು ನಿರ್ಮಾಣ, ರಾಮ ಸಮುದ್ರ ಸ್ವಚ್ಚತೆ ನಿರ್ಧಾರ, ತಾಲೂಕಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆ ನಿರ್ಮಾಣ, ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಅಭಿವೃದ್ಧಿ, ತಾಲೂಕು ಒಳಾಂಗಣ ಕ್ರೀಡಾಂಗಣ ಸೇರಿದಂತೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣ ಒಳಗೊಂಡಂತೆ ಶೇ.90 ರಷ್ಟು ಜನರ ನಿರೀಕ್ಷೆಯಂತೆ ಕೆಲಸ ಕಾರ್ಯಗಳನ್ನು ಮಾಡಿರುವುದಾಗಿ ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಮಂಜುನಾಥ ಪೈ ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ತಾಲೂಕು ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆನೆಗುದ್ದಿಗೆ ಬಿದ್ದಿರುವ ಡೀಮ್ಡ್ ಫಾರೆಸ್ಟ್ ಸಮಸ್ಸೆ ಹಾಗೂ ಕುಮ್ಕಿ ಹಕ್ಕು ನೀಡುವ ವಿಚಾರದಲ್ಲಿ ಸರಕಾರ ಜನರಪರವಾಗಿಯೇ ಕಾರ್ಯನಿರ್ವಹಿಸಲಿದೆ. ಮುಂದಿನ ಕೆಲ ತಿಂಗಳ ಅವಧಿಯೊಳಗಾಗಿ ಸರಕಾರದ ಹೊಸ ಆದೇಶ ಹೊರಬೀಳಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
"ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 492 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಹೆಬ್ರಿ ತಾಲೂಕಿನಲ್ಲಿ 93 ಹಾಗೂ ಕಾರ್ಕಳ ತಾಲೂಕಿನಲ್ಲಿ 399 ಸ್ಥಾನಗಳಿವೆ. ಅದರಲ್ಲಿ ಬಿಜೆಪಿ ಬೆಂಬಲಿತ 36 ಸ್ಥಾನಗಳಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. 34 ಗ್ರಾಮ ಪಂಚಾಯತ್ಗಳೆಲ್ಲವೂ ಬಿಜೆಪಿ ಗೆಲ್ಲಲ್ಲೇ ಬೇಕು. ನಲ್ಲೂರು ಗ್ರಾಮ ಪಂಚಾಯತ್ ವ್ಯಾಫ್ತಿಯ 15 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಬಿಜೆಪಿ ಬೆಂಬಲಿಗರು ಅವಿರೋಧ ಆಯ್ಕೆಯಾಗಿರುವ ಮೂಲಕ ಕಾರ್ಕಳ ತಾಲೂಕಿನಲ್ಲಿ ಮೊಟ್ಟ ಮೊದಲ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿಗರು ತಮ್ಮ ಬಗಲಿಗೆ ಹಾಕಿ ಕೊಂಡಿರುವುದು ಮೊದಲ ವಿಜಯ" ಎಂದು ಹೇಳಿದ್ದಾರೆ.
ಹಿರಿಯ ನೇತಾರ ಬೋಳ ಪ್ರಭಾಕರ ಕಾಮತ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಕೀಲರಾದ ಎಂ.ಕೆ.ವಿಜಯಕುಮಾರ್, ಮಣಿರಾಜ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ ಸಭೆಯನ್ನು ಉದ್ದೇಶಿ ಮಾತನಾಡಿದರು.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದು, ರೇಶ್ಮಾ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಜಯರಾಮ ಸಲ್ಯಾನ್,ಕುತ್ಯಾರು ನವೀನ್ ಶೆಟ್ಟಿ, ರವಿ ಅಮೀನ್ ಉಪಸ್ಥಿತರಿದ್ದರು.