ಮಂಗಳೂರು, ಡಿ.21 (DaijiworldNews/HR): ಡಿ. 22 ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಯಬೇಕಾಗಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಡಿ.21ರಂದು ಬೆಳಗ್ಗೆ 8 ರಿಂದ ಡಿ.22 ಸಂಜೆ 5 ಗಂಟೆ ವರೆಗೆ ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇನ್ನು ಮತದಾನ ನಡೆಯುವ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವವರನ್ನು ಬಿಟ್ಟು ಬೇರೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರಿಕೊಂಡಿರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಚುನಾವಣೆ ಹಿನ್ನಲೆಯಲ್ಲಿ ಯಾವುದೇ ಆಯುಧ, ಕತ್ತಿ, ಚೂರಿ, ದೊಣ್ಣೆಗಳನ್ನು ಸಾಗಿಸುವುದನ್ನು ಕೂಡ ನಿರ್ಬಂದ್ಗಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಘೋಷಣೆ, ಚಿತ್ರಗಳ ಪ್ರದರ್ಶನ, ಪತ್ರಿಕಾ ಪ್ರಕಟನೆ, ಭಿತ್ತಿಚಿತ್ರ ಅಂಟಿಸುವುದುದನ್ನು ನಿಷೇಧಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.