ಬಂಟ್ವಾಳ, ಡಿ.22 (DaijiworldNews/HR): ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಮತದಾನ ಆರಂಭವಾಗಿದೆ.




ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಒಂದನ್ನು ಹೊರತುಪಡಿಸಿ ಉಳಿದಂತೆ 57 ಗ್ರಾಮ ಪಂಚಾಯತ್ಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ.
ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಜೊತೆಗೆ ಪೊಲೀಸ್ ಸಂಪೂರ್ಣ ವ್ಯವಸ್ಥೆಯಲ್ಲಿ ಪಕ್ಷಾತೀತವಾಗಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆ ಶಾಂತಿಯುತವಾಗಿ ಆರಂಭವಾಗಿದೆ.