ಉಳ್ಳಾಲ, ಡಿ.22 (DaijiworldNews/MB) : ಮತಗಟ್ಟೆ ಎದುರು ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮತಗಟ್ಟೆ ಮುಂಭಾಗ ಇಂದು ನಡೆದಿದೆ.



ಕಾಂಗ್ರೆಸ್ ಕಾರ್ಯಕರ್ತರು ಬೂತ್ ಬಳಿ ಜಮಾಯಿಸಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿ ಎಸ್ ಡಿಪಿಐ ಕಾರ್ಯಕರ್ತರು ಮಾತಿಗೆ ಇಳಿದಿದ್ದರು. ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ ನಡೆದು ಹೊಯ್ಕೈಗೆ ತಲುಪಿದೆ.
ಈ ವೇಳೆ ಘಟನೆಯನ್ನು ಚಿತ್ರೀಕರಣ ನಡೆಸಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಅವರ ಮೊಬೈಲ್ ಎಳೆದು ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಇತ್ತಂಡಗಳನ್ನು ಚದುರಿಸಲು ಸ್ಥಳದಲ್ಲಿದ್ದ ಪೊಲೀಸರು ಲಾಠಿಚಾಜ್೯ ನಡೆಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.