ಬೆಂಗಳೂರು, ಜೂ 20: ಸಚಿವೆ ಜಯಮಾಲಾ ಸೇವೆ ಪಕ್ಷದ ನಾಯಕರಿಗೆ ಇಷ್ಟವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಯಮಾಲ ಅವರಲ್ಲಿ ಕ್ಷಮೆ ಕೇಳಿದ್ದಾರೆ ಎಂದು ಖುದ್ದು ಜಯಮಾಲಾ ಅವರೇ ಮಾಧ್ಯಮಗಳಿಗೆ ತಿಳಿಸಿ ಸದ್ಯ ವಿವಾದಕ್ಕೆ ತೆರೆ ಇಳಿದಿದ್ದಾರೆ. ನನ್ನನ್ನು ’ಅಕ್ಕ’ ಎಂದು ಕರೆದಿದ್ದು ಅವರು, ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೆಬ್ಬಾಲ್ಕರ್ ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಜಯಮಾಲ,ಶಾಸಕಿ ಲಕ್ಷ್ಮೀ ನನ್ನನ್ನು ಅಕ್ಕಾ ಎಂದು ಕರೆದಿದ್ದಾರೆ. ವಯಸ್ಸಿನಲ್ಲಿ ನಾನು ಅವರಿಗಿಂತ ದೊಡ್ಡವಳು. ಹಾಗಾಗಿ ಅವರು ಬಾಯಿತಪ್ಪಿ ಆಡಿದ ಮಾತಿಗೆ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿದ ಮೇಲೂ ಆ ವಿವಾದವನ್ನು ಮುಂದುವರಿಸುವುದು ಸರಿಯಲ್ಲ ಎಂದು ಹೇಳಿ ವಿವಾದಕ್ಕೆ ತೆರೆ ಎಳೆದಿದ್ದಾರೆ. ಪಕ್ಷಕ್ಕಾಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಆಸೆ ಪಡೋದು ಸಹಜ. ಹಾಗಾಗಿ ಸಚಿವ ಸ್ಥಾನಕ್ಕೆ ಅವರೂ ಆಸೆಪಟ್ಟಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೆಚ್ಚಿನ ಹೆಣ್ಣುಮಕ್ಕಳಿಗೆ, ಸಚಿವ ಸ್ಥಾನ ಸಿಗುವಂತಾಗಲಿ. ರೂಪಾ ಶಶಿಧರ್ ಕೂಡ ಸಚಿವೆ ಆಗಲಿ ಎಂದು ಹಾರೈಸುತ್ತೇನೆ,” ಎಂದು ಅವರು ಹೇಳಿದರು.