ವಿಟ್ಲ, ಡಿ. 23(DaijiworldNews/SM): ಕೊಳ್ನಾಡು ಗ್ರಾಮದ ಕುಳಾಲು ಎಂಬಲ್ಲಿ ತೆಂಗಿನಕಾಯಿ ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಹಿಂಭಾಗದಲ್ಲಿ ಯಾವುದೋ ಲಿಪಿಯಲ್ಲಿ ಬರೆಯಲಾಗಿದೆ. ಈ ಬಗ್ಗೆ ವಾಮಾಚಾರ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.


ಬಿಜೆಪಿ ಅಭ್ಯರ್ಥಿಯ ಮನೆ ಸಂಪರ್ಕ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಿಗೆ ಯಾವುದೋ ಲಿಪಿಯಲ್ಲಿ ಬರೆದು ತೆಂಗಿನಕಾಯಿ ಒಡೆದ ಸ್ಥಿತಿಯಲ್ಲಿ ಕಂಡುಬಂದಿದೆ. ಬಂಡಮುಗೇರು ಕ್ರಾಸ್ ನಲ್ಲಿಯೂ ಒಂದು ಯಾವುದೇ ಲಿಪಿ ಇರದ ಮಾಮೂಲಿ ತೆಂಗಿನಕಾಯಿ ಹಾಗೂ ಲಿಂಬೆ ಹುಳಿ ಒಡೆದಿರುವುದು ಕಂಡು ಬಂದಿದೆ. ಇದನ್ನು ಬಿಜೆಪಿ ಪ್ರಮುಖರು ಗಮನಿಸಿದ್ದು, ಕಾರ್ಯಕರ್ತರು ಕುಳಾಲಿನ ಕಾರಣಿಕ ಶಕ್ತಿ ಶ್ರೀ ವಾರಹಿ ದೈವದ ಮೊರೆ ಹೋಗಿ ದೈವದ ಚಾಕ್ರಿ ಮಾಡುತ್ತಿರುವ ಹಿರಿಯರಾದ ದೇವು ಸಪಲ್ಯ ಅವರ ಉಪಸ್ಥಿತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂತರ ಚುನಾವಣೆ ದಿವಸ ಸಂಜೆ ಬಿಜೆಪಿ ಕಾರ್ಯಕರ್ತರೊಬ್ಬರ ಮನೆಯ ಹತ್ತಿರ ಮತ್ತೊಂದು ತೆಂಗಿನಕಾಯಿ ಒಡೆದಿದ್ದು ಪತ್ತೆಯಾಗಿದೆ. ಇದೀಗ ಈ ಭಾಗದಲ್ಲಿ ಆತಂಕ ವ್ಯಕ್ತವಾಗಿದೆ.