ಕಾಸರಗೋಡು, ಡಿ.24 (DaijiworldNews/HR): ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸಹಾಕ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಾಸರಗೋಡು ಎಸ್ಪಿಯವರು ರಜೆಯಲ್ಲಿರುವುದರಿಂದ ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಕೃತ್ಯದಲ್ಲಿ ಐದು ಮಂದಿ ಶಾಮೀಲಾಗಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.