ಬೆಂಗಳೂರು , ಜೂ 21 : ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈದ್ಯಕೀಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾನೂನು ಹೋರಾಟ ನಡೆಸುತ್ತಿದ್ದು ಅವರಿಗೆ ನಮ್ಮ ಬೆಂಬಲವಿದೆ. ಹಾಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಒಂದು ವೇಳೆ ಅಂತಹ ಅನಿವಾರ್ಯತೆ ಕಂಡು ಬಂದಾಗ ನಾನೇ ಅವರಿಂದ ರಾಜೀನಾಮೆ ಕೇಳುತ್ತೇನೆ ಎಂದು ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ
ಮಾದ್ಯಮದೊಂದಿಗೆ ಮಾತನಾಡಿದ ಸಿಎಂ, ಕುಮಾರಸ್ವಾಮಿ ಕಾನೂನು ವ್ಯಾಪಿಯಲ್ಲಿ ಪ್ರತಿಯೊಬ್ಬನಿಗೂ ಹೋರಾಟಕ್ಕೆ ಅವಕಾಶ ಇದೆ. ಹೀಗಾಗಿ ಸಚಿವ ಡಿಕೆ ಶಿವಕುಮಾರ್ ಆ ನಿಟ್ಟಿನಲ್ಲಿ ಹೋರಾಡುತ್ತಿದ್ದಾರೆ. ಬಿಜೆಪಿಯ ಅನೇಕ ನಾಯಕರ ಮೇಲೆ ಆರೋಪಗಳಿವೆ, ಹಾಗಂತ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.