ಬಂಟ್ವಾಳ, ಡಿ. 26 (DaijiworldNews/MB) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಪ್ತಿಯ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸ್ಪರ್ಶ ಕಲಾ ಮಂದಿರ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು ಹಾಗೂ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯಲ್ಲಿ ಅನೇಕ ಜನ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಅವರನ್ನು ಮಾಜಿ ಸಚಿವರ ಸಮ್ಮುಖದಲ್ಲಿ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು.








ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್, ಪದ್ಮಶೇಖರ್ ಜೈನ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಬಂಟ್ವಾಳ ಪುರಸಭಾ ಅಧ್ಯಕ್ಷರಾದ ಶರೀಫ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ನಿಕಟ ಪೂರ್ವ ಅಧ್ಯಕ್ಷರು ಸುದರ್ಶನ್ ಜೈನ್, ಪುರಸಭಾ ಸದಸ್ಯರಾದ ಜನಾರ್ದನ್ ಚಂಡ್ತಿಮಾರ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.