ಸುಳ್ಯ, ಡಿ. 27 (DaijiworldNews/MB) : ಡಿಸೆಂಬರ್ 27 ರ ರವಿವಾರ ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಏತನ್ಮಧ್ಯೆ ಕಲ್ಮಡ್ಕದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದ ವ್ಯಕ್ತಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಹುಕ್ರಪ್ಪ ಅಲಿಯಾಸ್ ನಾರಾಯಣ ಪುಚಮಾ ಅತ್ಯಾಚಾರ ಆರೋಪದಲ್ಲಿ ಬಂಧಿತರಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ.
ಕಲ್ಮಡ್ಕ ಗ್ರಾಮ ಪಂಚಾಯಿತಿಯ ವಾರ್ಡ್ 1 ರಲ್ಲಿ ಹುಕ್ರಪ್ಪ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ.
ಚುನಾವಣೆಗೂ ಒಂದು ದಿನಕ್ಕೂ ಮುನ್ನ ಅಂದರೆ ಡಿಸೆಂಬರ್ 26 ರ ಶನಿವಾರದಂದು ಹುಕ್ರಪ್ಪ ಅವರ ಬಂಧನ ನಡೆದಿದೆ.
ಆರೋಪಿಯು ತನ್ನ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಬೆಳ್ಳಾರೆ ಪೊಲೀಸರು ಹುಕ್ರಪ್ಪರನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.