ಮಂಗಳೂರು, ಡಿ. 28 (DaijiworldNews/MB) : ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೊಸ ಮಂಗಳೂರು ಬಂದರಿನಿಂದ ನಗರಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು 72 ಗಂಟೆಯ ಒಳಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೂಪಾಂತರಿ ಕೊರೊನಾ ವೈರಸ್ನ ಎರಡನೇ ಅಲೆ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಗಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ವಿದೇಶದಿಂದ ಆಗಮಿಸುವ ಪ್ರಯಾಣಿಕರು ತಮ್ಮ ಕೊರೊನಾ ಪರೀಕ್ಷೆಯನ್ನು ಮಾಡದಿದ್ದರೆ, ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಡಿಸೆಂಬರ್ 26 ರಿಂದ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ತಪ್ಪದೆ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಅವರ ಪರೀಕ್ಷಾ ವರದಿ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ.
ಕೊರೊನಾ ವೈರಸ್ನ ಎರಡನೇ ಅಲೆ ಹರಡುವುದನ್ನು ತಡೆಗಟ್ಟಲು ಜನರು ಸಹಕರಿಸಬೇಕು ಎಂದು ಆರೋಗ್ಯ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.