ಕುಂದಾಪುರ, ಡಿ. 30 (DaijiworldNews/MB) : ತಾ.ಪಂ ಮಾಜಿ ಅಧ್ಯಕ್ಷ, ಸಹಕಾರಿ ಧುರೀಣ ದಿನಕರ್ ಶೆಟ್ಟಿ ಸುಣ್ಣಾರಿ (66) ಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬುಧವಾರ ಮೂರು ಗಂಟೆಯವರೆಗೆ ಕುಂದಾಪುರದ ಸ್ವಗೃಹದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
ಕುಟುಂಬಸ್ಥರು, ಅಭಿಮಾನಿಗಳು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.