ಬೆಳ್ತಂಗಡಿ, ಡಿ. 30 (DaijiworldNews/MB) : ರಾಜ್ಯದಾದ್ಯಂತ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಆರಂಭವಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮತ ಎಣಿಕೆ ಕೊಠಡಿಯಲ್ಲಿ ಸಿಬ್ಬಂದಿಯೊಬ್ಬರು ತಲೆ ತಿರುಗಿ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ವೇಣೂರಿನ ಗ್ರಾಮ ಸಹಾಯಕ ರಾಮಣ್ಣ ಅವರು ತಲೆ ತಿರುಗಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಇಲಾಖೆಯ ವಾಹನದಲ್ಲಿಯೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 624 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಮತ ಎಣಿಕೆ ಬಳಿಕ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.