ವಿಟ್ಲ, ಡಿ. 30 (DaijiworldNews/MB) : ಮಾಣಿಲ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು ಕಾಂಗ್ರೆಸ್ನಿಂದ ಮಾಣಿಲ ಗ್ರಾಮ ಪಂಚಾಯತ್ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ಈ ಹಿಂದೆ ಅಧ್ಯಕ್ಷರಾಗಿದ್ದ ರಾಜೇಶ್ ಬಾಳೆಕಲ್ಲು ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಶ್ರೀಧರ ಬಾಳೆಕಲ್ಲು, ವನಿತಾ ತಾರಿದಾಳ, ಚಂದ್ರ ಶೇಖರ ಪಕಳಕುಂಜ, ಗೀತಾ ಪಳನೀರು, ಮಾಲತಿ ಎನ್.ಕೆ. ಓಟೆಪಡ್ಪು, ಸುಜಾತ ಮುಜೂರು ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಬಿಜೆಪಿ ಮೂರು ಸ್ಥಾನಗಳನ್ನು ಹೊಂದಿತ್ತು. ಈ ಬಾರಿ ಒಂದು ಸ್ಥಾನವನ್ನು ಮಾತ್ರ ಬಿಜೆಪಿ ತನ್ನದಾಗಿಸಿಕೊಂಡಿದೆ. ಈ ಗ್ರಾಮದಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಪ್ರಮುಖ ನಾಯಕರು ಪ್ರಚಾರ ನಡೆಸಿದ್ದರು.
ಎಂಟು ಸ್ಥಾನಗಳಲ್ಲಿ ಕಾಂಗ್ರೆಸ್ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆದ್ದಿದೆ.