ಮಂಗಳೂರು, ಡಿ. 30 (DaijiworldNews/MB) : ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಲ್ಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಎಸ್ಡಿಪಿಐ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಹೊರಗೆ ಸಂಭ್ರಮಿಸಿದ್ದಾರೆ.















ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ, ಎಸ್ಡಿಪಿಐ ಕಾರ್ಯಕರ್ತರ ಹರ್ಷೋದ್ಘಾರ ಮೊಳಗುತ್ತಿದ್ದು ಈ ಕಾರ್ಯಕರ್ತರ ಸಂಭ್ರಮಕ್ಕೆ ಪೊಲೀಸರು ಹೈರಾಣಾಗಿದ್ದಾರೆ.
ಎಸ್ಡಿಪಿಐ ಹಾಗೂ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಪಕ್ಷದ ಧ್ವಜ ಹಿಡಿದು ಸಂಭ್ರಮಿಸುತ್ತಿದ್ದು ಈ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಕೆಎಸ್ಆರ್ಪಿ ನಿಯೋಜನೆ ಮಾಡಲಾಗಿದೆ.