ಬಂಟ್ವಾಳ, ಡಿ.30 (DaijiworldNews/PY): ತೀವ್ರ ಕುತೂಹಲ ಕೆರಳಿಸಿದ್ದ ಮಾಣಿ ಗ್ರಾಮಪಂಚಾಯತ್ನ 10 ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ 8 ಮಂದಿ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.

ಇಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಸ್ವತಃ ಚುನಾವಣೆಗೆ ಸ್ಪರ್ಧಿಸಿ ವಿಜಯ ಸಾಧಿಸಿದ್ದು, ಉಳಿದಂತೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಇಬ್ರಾಹಿಂ ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ರಮಣಿ, ಬಾಲಕೃಷ್ಣ ಆಳ್ವ, ಪ್ರೀತಿ ಪಿರೇರಾ, ಸುಜಾತ ಗೆಲುವು ಸಾಧಿಸಿದ್ದು, ಬಿಜೆಪಿ ಬೆಂಬಲಿತ ಪೈಕಿ ನಾರಾಯಣ ಶೆಟ್ಟಿ ಕೊಂಬಿಲ ಹಾಗೂ ಮಿತ್ರಾಕ್ಷಿ ಗೆಲುವು ಸಾಧಿಸಿದ್ದಾರೆ.
ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 5 ಸ್ಥಾನಗಳನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅದೃಷ್ಟಚೀಟಿಯ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿತ್ತು. ಈ ಬಾರಿ ಕಾಂಗ್ರೆಸ್ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ.
ಪಿಲಾತಬೆಟ್ಟು ಗ್ರಾಮಪಂಚಾಯತ್ನಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಲಕ್ಮೀನಾರಾಯಣ ಹೆಗ್ಡೆ, ಯೋಗೇಂದ್ರ, ಕಾಂತಪ್ಪ ಪೂಜಾರಿ, ಹರ್ಷಿಣಿ, ಶಾರದ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ನೆಲ್ವಿ ಸ್ಟಾರ್, ಚಂದ್ರಲೇಖ, ಪುಷ್ಪಲತಾ, ವನಿತ ಜಯಸಾಧಿಸಿದ್ದಾರೆ.
ಕರಿಯಂಗಳ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಒಟ್ಟು 12 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ. ಅದರಲ್ಲಿ ಒಂದು ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಚಂದ್ರಹಾಸ ಪಲ್ಲಿಪಾಡಿ, ರಾಜು ಜಿ.ಕೋಟ ದಯಾನ್, ರಾಜಲೋಕೇಶ್ ಪೂಜಾರಿ, ವೀಣಾ ಆಚಾರ್ಯ, ಲಕ್ಮೀಶ್ ಶೆಟ್ಟಿ, ಲತೀಫ್ ಕಲ್ಕುಟ, ಶಮೀರ್ ಗಾಣೆಮಾರ್, ನಾಗವೇಣಿ ಗೀತಾ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಲೋಕೇಶ್ ಹಾಗೂ ಚಂದ್ರಾವತಿ ಹಾಗೂ ಗೀತಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
ರಾಯಿ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಒಟ್ಟು 12 ಸ್ಥಾನಗಳ ಪೈಕಿ ಬಿಜೆಪಿ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 1 ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪಾಲಿಗೆ ದಕ್ಕಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಯಶೋಧ, ಸಂತೋಷ್, ಸಂತೋಷ ರಾಯಿಬೆಟ್ಟು, ಸುರೇಶ್, ರತ್ನಾ, ರಶ್ಮಿತ್ ಶೆಟ್ಟಿ, ರವೀಂದ್ರ ಪೂಜಾರಿ ಬದನಾಡಿ, ಪುಷ್ಪಾವತಿ , ಗುಣವತಿ, ದಿನೇಶ್ ಶೆಟ್ಟಿ ಅವರು ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶೋಭಾ ಗೆಲುವು ಸಾಧಿಸಿದ್ದಾರೆ.
ಸಂಗಬೆಟ್ಟು ಗ್ರಾ.ಪಂ.ನಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ - ಒಟ್ಟು 15 ಸ್ಥಾನಗಳ ಪೈಕಿ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕಾಂಗ್ರೆಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸತೀಶ್ ಪೂಜಾರಿ, ಸಂದೇಶ್ ಶೆಟ್ಟಿ, ಉದಯ ಪೂಜಾರಿ, ಸುರೇಶ್ ಕುಲಾಲ್, ಸುನಿಲ್ ಶೆಟ್ಟಿಗಾರ್, ಪ್ರೇಮ.ಬಿ, ವಿದ್ಯಾಆಶೋಕ್ ಪ್ರಭು, ಹೇಮಲತಾ, ರಾಜೀವಿ, ದಾಮೋದರ ಪೂಜಾರಿ, ವಿಮಲಮೋಹನ್, ಶಕುಂತಲಾ, ಶಾಂತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ದೇವಪ್ಪ ಕರ್ಕೇರ, ಬೆನೆಡಿಕ್ಟ್ ಡಿ.ಕೋಸ್ತಾ ಅವರು ವಿಜಯಗಳಿಸಿದ್ದಾರೆ.