ಕಾರ್ಕಳ, ಜ.01 (DaijiworldNews/PY): ಹೊಸ ವರ್ಷಾಚರಣೆಗೆ ಸ್ವಾಗತ ಕೋರಲು ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬಜಗೋಳಿ ಸಮೀಪದ ಮೀಯಾರ್ನಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಹೊಸ ವರ್ಷದ ಸಂಭ್ರಮದಲ್ಲಿದ್ದ ಯುವಕರು ಡಿ.31ರ ಗುರುವಾರ ರಾತ್ರಿ 10.30 ರ ಸುಮಾರಿಗೆ ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುತ್ತಿದ್ದರು. ಈ ಸಂದರ್ಭ ಏಕಾಏಕಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.
ಇಬ್ಬರೂ ಯುವಕರು ಕೂಡಾ ಸ್ಥಳೀಯರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.