ಕಾರ್ಕಳ, ಜ.01 (DaijiworldNews/PY): ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಘಟನೆ ಮಾಳ ಗೇಟು ಸಮೀಪದಲ್ಲಿ ಶುಕ್ರವಾರ ಸಂಭವಿಸಿದೆ.

ಬೈಕ್, ಬಜಗೋಳಿ ಕಡೆಯಿಂದ ಮಾಳ ಎಸ್.ಕೆ ಬಾರ್ಡರ್ ಕಡೆಗೆ ಹೋಗುತ್ತಿದ್ದು, ಕೆಎಸ್ಆರ್ಟಿಸಿ ಬಸ್ಸು ಕಾರ್ಕಳದ ಕಡೆಗೆ ಬರುತ್ತಿತ್ತು. ಅಫಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸ್ಥಳೀಯ ನಾಗರಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾಗಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.