ಮಂಗಳೂರು, ಜ.02 (DaijiworldNews/PY): "ಜಿಲ್ಲೆಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ 9 ರಂತೆ ಕಂಟೈನ್ ಮೆಂಟ್ ವಲಯದ ಹೊರಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶಕ್ಕಾಗಿ ಮಾತ್ರವೇ ಈಜುಕೊಳಗಳನ್ನು ತೆರೆಯಲು ಹಾಗೂ ಬಳಕೆ ಮಾಡಲು ಅವಕಾಶವಿರುತ್ತದೆ. ಇದನ್ನು ಹೊರತುಪಡಿಸಿ ಯಾವುದೇ ಹೋಟೆಲ್, ಲಾಡ್ಜ್, ರೆಸಾರ್ಟ್ಗಳಲ್ಲಿ ಈಜುಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿರುವುದಿಲ್ಲ" ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

"ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟುನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಯಾವುದೇ ಈಜುಕೊಳಗಳನ್ನು ಪ್ರಾರಂಭಿಸಲು ಜಿಲ್ಲಾಡಳಿತದ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದ್ದು, ಹಾಗೂ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020ರನ್ವಯ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು" ಎಂದು ತಿಳಿಸಿದ್ದಾರೆ.